ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 06

ಶ್ಲೋಕ – 28

ಯುಂಜನ್ ಏವಂ ಸದಾತ್ಮಾನಂ ಯೋಗೀ ವಿಗತಕಲ್ಮಷಃ ।
ಸುಖೇನ ಬ್ರಹ್ಮಸಂಸ್ಪರ್ಶಮತ್ಯಂತಂ ಸುಖಮಶ್ನುತೇ ॥೨೮॥

ಯುಂಜನ್ ಏವಮ್ ಸದಾ ಆತ್ಮಾನಮ್ ಯೋಗೀ ವಿಗತ ಕಲ್ಮಷಃ ।

ಸುಖೇನ ಬ್ರಹ್ಮಸಂಸ್ಪರ್ಶಮ್ ಅತ್ಯಂತಮ್ ಸುಖಮಶ್ನುತೇ-ಹೀಗೆ ಕೊಳೆಯಳಿದು ಸದಾ ಭಗವಂತನನ್ನು ಧ್ಯಾನಿಸುವ ಸಾಧಕನು ಹಾಯಾಗಿ ಭಗವದನುಭವದ ಪರಮ ಸುಖವನ್ನು ಉಣ್ಣುತ್ತಾನೆ.

ಭಗವದ್ ಅನುಭೂತಿ ಆದಾಗ ಆಗುವ ಅಂತರಂಗದ ಆನಂದವನ್ನು ಇನ್ನೊಂದು ರೀತಿಯಲ್ಲಿ ಕೃಷ್ಣ ಇಲ್ಲಿ ವಿವರಿಸಿದ್ದಾನೆ. ಕೃಷ್ಣ ಹೇಳುತ್ತಾನೆ “ಯುಂಜನ್ ಏವಂ ಸದಾತ್ಮಾನಂ ಯೋಗೀ ವಿಗತಕಲ್ಮಷಃ” ಎಂದು. ಕೃಷ್ಣನ ಈ ನುಡಿಯನ್ನು ಎರಡು ರೂಪದಲ್ಲಿ ಕಾಣಬಹುದು. ಮೊದಲನೆಯದಾಗಿ “ವಿಗತಕಲ್ಮಷ ಸನ್ ಆತ್ಮಾನಂ ಯುಂಜನ್” ಹಾಗು ಎರಡನೆಯದಾಗಿ “ಆತ್ಮಾನಂ ಯುಂಜನ್ ಸನ್ ವಿಗತಕಲ್ಮಷಃ”. ನಾವು ಮೊದಲು ವಿಗತಕಲ್ಮಶವಾದ ಮನಸ್ಸಿನಿಂದ ಭಗವಂತನನ್ನು ಕಾಣಬೇಕು, ನಂತರ ಭಗವಂತನನ್ನು ಧ್ಯಾನ ಮಾಡುತ್ತಾ ವಿಗತಕಲ್ಮಷರಾಗಬೇಕು. ಭಗವಂತನ ಧ್ಯಾನಕ್ಕೊಸ್ಕರ ಮನಸ್ಸನ್ನು ಸ್ವಚ್ಛಗೊಳಿಸಿ ಒಮ್ಮೆ ಭಗವಂತನನ್ನು ಕಾಣಬಹುದು ಆದರೆ ಭಗವಂತನ ಅನುಭವದಿಂದ ಕೆಳಗಿಳಿದ ತಕ್ಷಣ ತಾಮಸ ಆವೇಶ ನಮ್ಮ ಮನಸ್ಸನ್ನು ಕೆಡಿಸಬಹುದು. ಅದಕ್ಕಾಗಿ ಸದಾ ಭಗವದ್ ಅನುಭೂತಿಯಲ್ಲೇ ನೆಲೆಗೊಳ್ಳಬೇಕು. ಇದರರ್ಥ ದಿನದ ಇಪತ್ನಾಲ್ಕು ಗಂಟೆ ಧ್ಯಾನದಲ್ಲೇ ಇರಬೇಕು ಎಂದಲ್ಲ, ಬದಲಾಗಿ ಸದಾ ಭಗವಂತನ ಗುಂಗಿನಲ್ಲಿರುವುದು. ಹೀಗಿದ್ದಾಗ ಮನಸ್ಸು ನಿರಂತರ ಸ್ವಚ್ಛವಾಗಿರುತ್ತದೆ. ಹೀಗೆ ಭಗವದ್ಪ್ರಜ್ಞೆ ಗಟ್ಟಿಗೊಂಡಾಗ ಸಾಧಕ ಅನಾಯಾಸವಾಗಿ ಭಗವಂತನನ್ನು ನೇರವಾಗಿ ಕಾಣುವ ಅತ್ಯಂತ ಸುಖಾನುಭವವನ್ನು ಪಡೆಯತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *