ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 06

ಶ್ಲೋಕ – 38

ಕಚ್ಚಿನ್ನೋಭಯವಿಭ್ರಷ್ಟಶ್ಛಿನ್ನಾಭ್ರಮಿವ ನಶ್ಯತಿ ।
ಅಪ್ರತಿಷ್ಠೋ ಮಹಾಬಾಹೋ ವಿಮೂಢೋ ಬ್ರಹ್ಮಣಃ ಪಥಿ ॥೩೮॥

ಕಚ್ಚಿತ್ ನ ಉಭಯ ವಿಭ್ರಷ್ಟಃ ಛಿನ್ನ ಅಭ್ರಮ್ ಇವ ನಶ್ಯತಿ ।

ಅಪ್ರತಿಷ್ಠಃ ಮಹಾಬಾಹೋಃ ವಿಮೂಢಃ ಬ್ರಹ್ಮಣಃ ಪಥಿ –ಓ ಮಹಾವೀರ, ನೆಲೆಗಾಣದೆ, ಭಗವಂತನ ದಾರಿಯಲ್ಲಿ ಗುರಿತಪ್ಪಿದ ಅವನು ಇಲ್ಲೂ ಇಲ್ಲದೆ ಅಲ್ಲೂ ಸಲ್ಲದೆ ತುಂಡು ಮೋಡದಂತೆ ಮರೆಯಾಗುವನೆ?

ಇಂತವರು ಇಹವೂ ಇಲ್ಲದೆ, ಪರವೂ ಇಲ್ಲದೆ, ಒಂದು ತುಣುಕು ಮೋಡದಂತೆ ಆ ಕಡೆ ನೆರಳೂ ಆಗದೆ, ಈಚೆ ಮಳೆಯೂ ಸುರಿಸದೆ ಯಾವುದಕ್ಕೂ ಉಪಯೋಗವಿಲ್ಲದೆ ವ್ಯರ್ಥವಾಗಿ ಹೋಗುವುದೋ ಅವರ ಬದುಕು? ಜ್ಞಾನ ಬಲ ಇಚ್ಛಾ ಸ್ವರೂಪನಾದ(ಮಹಾಬಾಹೋಃ) ನೀನು ಅಂತಹ ವಯವಿಭ್ರಷ್ಟರನ್ನು ಏನು ಮಾಡುತ್ತೀಯ?

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *