ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 07

ಶ್ಲೋಕ – 07

ಮತ್ತಃ ಪರತರಂ ನಾನ್ಯತ್ ಕಿಂಚಿದಸ್ತಿ ಧನಂಜಯ ।
ಮಯಿ ಸರ್ವಮಿದಂ ಪ್ರೋತಂ ಸೂತ್ರೇ ಮಣಿಗಣಾ ಇವ ॥೭॥

ಮತ್ತಃ ಪರತರಂ ನಾನ್ಯತ್ ಕಿಂಚಿದಸ್ತಿ ಧನಂಜಯ ।

ಮಯಿ ಸರ್ವಮಿದಂ ಪ್ರೋತಂ ಸೂತ್ರೇ ಮಣಿಗಣಾ ಇವ-ಧನಂಜಯ, ನಾನಲ್ಲದೆ ಇನ್ನೊಂದು ಪರತರ ವಸ್ತು ಇಲ್ಲ. ಈ ಎಲ್ಲ ನನ್ನಲ್ಲೆ ಹೆಣೆದುಕೊಂಡಿದೆ-ದಾರದಲ್ಲಿ ಮಣಿಗಳ ರಾಶಿ ಹೇಗೆ ಹಾಗೆ.

ಕೃಷ್ಣ ಹೇಳುತ್ತಾನೆ “ ನನ್ನನ್ನು ಮೀರಿ ನನ್ನಿಂದ ಹಿರಿದಾದ, ನನಗಿಂತ ಬೇರೆಯಾದ ಇನ್ನೊಂದು ವಸ್ತುವಿಲ್ಲ” ಎಂದು. ಚಿತ್ ಪ್ರಕೃತಿ, ಜಡ ಪ್ರಕೃತಿ, ಇದರಿಂದ ದೇಹ ಧಾರಣೆ ಮಾಡಿದ ಜೀವಜಾತ, ವಾಸಿಸುವ ಬ್ರಹ್ಮಾಂಡ, ಈ ಪಿಂಡಾಂಡ, ಎಲ್ಲವೂ ಕೂಡ ಭಗವಂತನಲ್ಲಿ ದಾರದಲ್ಲಿ ಮಣಿಗಳು ಹೆಣೆದುಕೊಂಡಂತೆ ಹೆಣೆದುಕೊಂಡಿವೆ. ಇಡೀ ವಿಶ್ವವನ್ನು ಜೀವಜಾತವನ್ನು ಹೆಣೆದ ಸೂತ್ರ ಆ ಭಗವಂತ.

ಮುಂದೆ ಕೃಷ್ಣ ಒಂದೊಂದು ವಸ್ತುವಿನಲ್ಲಿ ಯಾವರೀತಿ ಭಗವಂತನ ವಿಭೂತಿ ಅಡಗಿದೆ ಎನ್ನುವ ವಿಜ್ಞಾನವನ್ನು ಸುವಿವರವಾಗಿ ವಿವರಿಸುತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *