ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 10

ಶ್ಲೋಕ – 10

ತೇಷಾಂ ಸತತಯುಕ್ತಾನಾಂ ಭಜತಾಂ ಪ್ರೀತಿಪೂರ್ವಕಮ್ ।
ದದಾಮಿ ಬುದ್ಧಿಯೋಗಂ ತಂ ಯೇನ ಮಾಮುಪಯಾಂತಿ ತೇ ॥೧೦॥

ತೇಷಾಮ್ ಸತತ ಯುಕ್ತಾನಾಮ್ ಭಜತಾಮ್ ಪ್ರೀತಿ ಪೂರ್ವಕಮ್ ।

ದದಾಮಿ ಬುದ್ಧಿಯೋಗಮ್ ತಮ್ ಯೇನ ಮಾಮ್ ಉಪಯಾಂತಿ ತೇ –ನನ್ನಲ್ಲೆ ಅನುಗಾಲ ಬಗೆಯಿಟ್ಟು ಪ್ರೀತಿಯಿಂದ ಸೇವಿಸುವವರಿಗೆ ಆ ತಿಳಿವಿನ ದಾರಿಯನ್ನು ಕರುಣಿಸುತ್ತೇನೆ. ಅದರಿಂದ ಅವರು ನನ್ನನ್ನೆ ಸೇರುತ್ತಾರೆ.

ಈ ಶ್ಲೋಕದಲ್ಲಿ “ಸತತಯುಕ್ತಾನಾಂ” ಎನ್ನುವಲ್ಲಿ ಬರುವ ‘ಯುಕ್ತಿ’ ಎನ್ನುವ ಶಬ್ದಕ್ಕೆ ಸಂಸ್ಕೃತದಲ್ಲಿ ಅನೇಕ ಅರ್ಥಗಳಿವೆ. ಬಹಳ ಯೋಗ್ಯವಾದ ಆಚಾರನಿಷ್ಠೆ ಹೊಂದಿ, ದಾರಿತಪ್ಪದೆ, ಜಾರದೆ ಬದುಕುವುದು ಯುಕ್ತಿ. ಭಗವಂತನ ಅನುಸಂಧಾನಕ್ಕೆ ಪೂರಕವಾದ ವೇದಾಧ್ಯಯನವನ್ನು ಗ್ರಹಿಸುವುದು ಯುಕ್ತಿ. ಭಗವಂತನಲ್ಲಿ ಮನಸ್ಸನ್ನು ನೆಲೆಗೊಳಿಸುವುದು ಯುಕ್ತಿ. ಇಲ್ಲಿ ಕೃಷ್ಣ ಹೇಳುತ್ತಾನೆ: “ಯಾವ ಬುದ್ಧಿಯೋಗದಿಂದ ಭಗವಂತನನ್ನು ಸೇರುವುದು ಸಾಧ್ಯವೋ ಅಂತಹ ವಿಷಯ ಚಿಂತನೆ ಮಾಡುವ ಮನಸ್ಸು, ಭಕ್ತಿಯಿಂದ ಚಿಂತನೆ ಮಾಡಬೇಕು ಎನ್ನುವ ಬುದ್ಧಿ, ನಿಶ್ಚಯವಾದ ಜ್ಞಾನವನ್ನು-ನಾನೇ ಕೊಡುತ್ತೇನೆ” ಎಂದು. ಭಗವಂತನಲ್ಲಿ ಶರಣಾಗಿ ಪ್ರೀತಿಯಿಂದ ಅವನನ್ನು ಸೇವಿಸಿದಾಗ-ಭಗವಂತನನ್ನು ಸೇರುವ ಮಾರ್ಗವನ್ನು ಭಗವಂತನೇ ತೋರಿಸುತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *