ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 10

ಶ್ಲೋಕ – 14

ಸರ್ವಮೇತದೃತಂ ಮನ್ಯೇ ಯನ್ಮಾಂ ವದಸಿ ಕೇಶವ ।
ನಹಿ ತೇ ಭಗವನ್ ವ್ಯಕ್ತಿಂ ವಿದುರ್ದೇವಾ ನ ದಾನವಾಃ ॥೧೪॥

ಸರ್ವಮ್ ಏತತ್ ಋತಮ್ ಮನ್ಯೇ ಯತ್ ಮಾಮ್ ವದಸಿ ಕೇಶವ ।

ನ ಹಿ ತೇ ಭಗವನ್ ವ್ಯಕ್ತಿಮ್ ವಿದುಃ ದೇವಾಃ ನ ದಾನವಾಃ – ಓ ಕೇಶವ, ನೀನು ನನಗೇನು ಹೇಳಿದೆ ಅದೆಲ್ಲ ನಿಜವೆಂದು ಬಲ್ಲೆ. ಓ ಭಗವಾನ್, ನೀನು ಮೂಡಿಬಂದ ಬಗೆಯನ್ನು ದೇವತೆಗಳಾಗಲಿ, ದಾನವರಾಗಲಿ ಅರಿತವರಲ್ಲ.

“ನೀನು ಹೇಳುತ್ತಿರುವುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ ಎನ್ನುವುದನ್ನು ಬಲ್ಲೆ. ನಿನ್ನ ಅರಿವಿನ ಅಭಿವ್ಯಕ್ತಿಯನ್ನು ದೇವತೆಗಳಾಗಲಿ ದಾನವರಾಗಲಿ ತಿಳಿದಿಲ್ಲ” ಎನ್ನುತ್ತಾನೆ ಅರ್ಜುನ. ದೇವತೆಗಳಿಗೆ ಭಗವಂತನ ಗುಣಪ್ರಮಾಣವನ್ನು ಅಳೆಯಲು ಸಾಧ್ಯವಾಗಿಲ್ಲ. ದಾನವರು ಭಗವಂತನಲ್ಲಿ ದೋಷ ಹುಡುಕುವುದರಲ್ಲಿ ಯಶಸ್ವಿ ಆಗಿಲ್ಲ. ಏಕೆಂದರೆ ಭಗವಂತ ಅನಂತ ಗುಣಪೂರ್ಣ. ಆತನಲ್ಲಿ ಯಾವುದೇ ದೋಷವಿಲ್ಲ. ಆತನನ್ನು ಪೂರ್ಣ ಅರ್ಥಮಾಡಿಕೊಳ್ಳುವುದು ಅಸಾಧ್ಯ. ಭಗವಂತನ ಬಗೆಗೆ ಅವನೇ ಹೇಳಬೇಕು ಹೊರತು ಇನ್ನೊಬ್ಬರು ಅದನ್ನು ವರ್ಣಿಸಲು ಸಾಧ್ಯವಿಲ್ಲ. ಭಗವಂತನನ್ನು ಪೂರ್ಣ ತಿಳಿಯುವುದು ಹಾಗಿರಲಿ, ಆತನ ಒಂದು ಅವತಾರವನ್ನು, ಅವತಾರದಲ್ಲಿನ ಆತನ ಒಂದು ಲೀಲೆಯನ್ನು ಪೂರ್ಣ ಅರ್ಥಮಾಡಿಕೊಳ್ಳುವುದು ಕಷ್ಟ. ಕೃಷ್ಣ ತನ್ನ ಅವತಾರದಲ್ಲಿ ನಡೆದುಕೊಂಡ ರೀತಿ ನಮಗೆ ಅರ್ಥವಾಗುವುದಿಲ್ಲ. ನಮಗೆ ಅದು ವಿಚಿತ್ರ ಎನಿಸುತ್ತದೆ. ಆತನನ್ನು ಅರಿಯುವುದು ಅಷ್ಟು ಸುಲಭದ ಕೆಲಸವಲ್ಲ. ಆತನ ಒಂದೊಂದು ನಡೆಯ ಹಿಂದೆ ಒಂದೊಂದು ಸಂದೇಶವಿದೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *