ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 10

ಶ್ಲೋಕ – 07

ಏತಾಂ ವಿಭೂತಿಂ ಯೋಗಂ ಚ ಮಮ ಯೋ ವೇತ್ತಿ ತತ್ತ್ವತಃ ।
ಸೋSವಿಕಲ್ಪೇನ ಯೋಗೇನ ಯುಜ್ಯತೇ ನಾತ್ರ ಸಂಶಯಃ ॥೭॥

ಏತಾಮ್ ವಿಭೂತಿಮ್ ಯೋಗಮ್ ಚ ಮಮ ಯಃ ವೇತ್ತಿ ತತ್ತ್ವತಃ ।

ಸಃ ಅವಿಕಲ್ಪೇನ ಯೋಗೇನ ಯುಜ್ಯತೇ ನ ಅತ್ರ ಸಂಶಯಃ –-ನನ್ನ ಈ ಹಿರಿಮೆಯನ್ನು [ಸನ್ನಿಧಾನದಿಂದ ಹಿರಿಮೆಯನ್ನೀಯುವ ನನ್ನ ರೂಪಗಳ ಬಗೆಯನ್ನು] ಮತ್ತು ಆಳವನ್ನು ಸರಿಯಾಗಿ ತಿಳಿದವನು ಪರಿಶುದ್ಧವಾದ ಧ್ಯಾನಯೋಗದಲ್ಲಿ ನೆಲೆಗೊಳ್ಳುತ್ತಾನೆ. ಇದರಲ್ಲಿ ಸಂದೇಹವಿಲ್ಲ.

ಭಗವಂತನ ಹಿರಿಮೆಯನ್ನು, ಆತನ ವಿವಿಧ ರೂಪವನ್ನು, ಅದರ ಆಳವನ್ನು-ಯಥಾರ್ಥವಾಗಿ ತಿಳಿದರೆ ನಮಗೆ ಸಹಜವಾಗಿ ಶರಣಾಗತಿ ಬರುತ್ತದೆ. ಭಗವಂತನ ಬಗೆಗಿನ ಜ್ಞಾನ ನಮ್ಮಲ್ಲಿ ದೃಢನಂಬಿಕೆಯನ್ನು ಹುಟ್ಟಿಸುತ್ತದೆ. ಶ್ರದ್ಧೆ ಮತ್ತು ಭಕ್ತಿಯಿಂದ ತುಂಬಿದ ಮನಸ್ಸು ಭಗವಂತನಲ್ಲಿ ನೆಲೆನಿಲ್ಲುತ್ತದೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *