ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 12

ಶ್ಲೋಕ – 20

ಯೇ ತು ಧರ್ಮ್ಯಾಮೃತಮಿದಂ ಯಥೋಕ್ತಂ ಪರ್ಯುಪಾಸತೇ ।
ಶ್ರದ್ದಧಾನಾ ಮತ್ ಪರಮಾ ಭಕ್ತಾಸ್ತೇSತೀವ ಮೇ ಪ್ರಿಯಾಃ ॥೨೦॥

ಯೇ ತು ಧರ್ಮ ಅಮೃತಮ್ ಇದಮ್ ಯಥಾಉಕ್ತಮ್ ಪರ್ಯುಪಾಸತೇ ।

ಶ್ರದ್ದಧಾಣಾಃ ಮತ್ ಪರಮಾಃ ಭಕ್ತಾಃ ತೇ ಅತೀವ ಮೇ ಪ್ರಿಯಾಃ –ಧರ್ಮ ಮೋಕ್ಷಗಳಿಗೆ ಸಾಧನವಾದ ಈ ಭಕ್ತಿ ಯೋಗವನ್ನು ಇಲ್ಲಿ ಹೇಳಿದ ತರ ಆಚರಿಸುವವರು, ನನ್ನ ಹಿರಿಮೆಯನ್ನು ನಂಬಿ ನಡೆದು ನನ್ನಲ್ಲಿ ಭಕ್ತಿಯಿಟ್ಟವರು –ಅಂಥವರು ನನಗೆ ತುಂಬ ಅಚ್ಚುಮೆಚ್ಚು.

ನಮ್ಮ ಭಕ್ತಿ ಹೇಗಿರಬೇಕು, ಭಕ್ತನಲ್ಲಿರಬೇಕಾದ ಗುಣಗಳೇನು ಎನ್ನುವ ಈ ಅಮೃತ(ಮೋಕ್ಷ)ಸಾಧನಾ ಧರ್ಮವನ್ನು ವಿವರಿಸಿದ ಕೃಷ್ಣ, ಇಲ್ಲಿ ಫಲಶ್ರುತಿಯಾಗಿ ಹೇಳುತ್ತಾನೆ: “ಇಲ್ಲಿ ಹೇಳಿದಂತೆ ಉಪಾಸನೆ ಮಾಡುವವರು, ಗುಣಧರ್ಮವನ್ನು ಬೆಳೆಸಿಕೊಂಡವರು, ಭಕ್ತಿಯಿಂದ ಆಚರಣೆಗೆ ತಂದುಕೊಳ್ಳುವ ಭಕ್ತರು ನನಗೆ ಪರಮ ಪ್ರಿಯರು” ಎಂದು.

ಇತಿ ದ್ವಾದಶೋSಧ್ಯಾಯಃ
ಹನ್ನೆರಡನೆಯ ಅಧ್ಯಾಯ ಮುಗಿಯಿತು

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *