ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 12

ಶ್ಲೋಕ – 06 & 07

ಯೇ ತು ಸರ್ವಾಣಿ ಕರ್ಮಾಣಿ ಮಯಿ ಸಂನ್ಯಸ್ಯ ಮತ್ಪರಾಃ ।
ಅನನ್ಯೇನೈವ ಯೋಗೇನ ಮಾಂ ಧ್ಯಾಯಂತ ಉಪಾಸತೇ ॥೬॥

ತೇಷಾಮಹಂ ಸಮುದ್ಧರ್ತಾ ಮೃತ್ಯುಸಂಸಾರಸಾಗರಾತ್ ।
ಭವಾಮಿ ನಚಿರಾತ್ ಪಾರ್ಥ ಮಯ್ಯಾವೇಶಿತಚೇತಸಾಮ್ ॥೭॥

ಯೇ ತು ಸರ್ವಾಣಿ ಕರ್ಮಾಣಿ ಮಯಿ ಸಂನ್ಯಸ್ಯ ಮತ್ ಪರಾಃ ।

ಅನನ್ಯೇನ ಏವ ಯೋಗೇನ ಮಾಮ್ ಧ್ಯಾಯಂತ ಉಪಾಸತೇ ||

ತೇಷಾಮಹಂ ಸಮುದ್ಧರ್ತಾ ಮೃತ್ಯುಸಂಸಾರಸಾಗರಾತ್ ।

ಭವಾಮಿ ನಚಿರಾತ್ ಪಾರ್ಥ ಮಯ್ಯಾವೇಶಿತಚೇತಸಾಮ್ –ಕೆಲವರಿರುತ್ತಾರೆ: ಅವರು ಮಾಡಿದ್ದನ್ನೆಲ್ಲ ನನ್ನಲ್ಲಿ ಅರ್ಪಿಸಿಬಿಡುತ್ತಾರೆ. ಅವರು ನನ್ನಲ್ಲೆ ಬಗೆಯಿಟ್ಟವರು. ಅವರ ಸಾಧನೆಯ ಗುರಿ ನಾನಲ್ಲದೆ ಬೇರಿಲ್ಲ. ನನ್ನನ್ನೆ ನೆನೆಯುತ್ತ ಸೇವಿಸುತ್ತಾರೆ. ಓ ಪಾರ್ಥಾ, ನನ್ನನ್ನೆ ನೆಚ್ಚಿದ ಅಂಥವರನ್ನು ನಾನು ಬಹುಬೇಗ ಸಾವಿನ ಬಾಳಿನ ಕಡಲಿನಿಂದ ಬಿಡುಗಡೆಗೊಳಿಸುತ್ತೇನೆ.

ಕೃಷ್ಣ ಹೇಳುತ್ತಾನೆ: “ನನ್ನನ್ನು ಸೇರುವ ಸುಲಭ ಸಾಧನವೆಂದರೆ-ನೀನು ಜೀವನ ನಿರ್ವಹಣೆಗಾಗಿ ಯಾವ ಕ್ರಿಯೆಯನ್ನು ಮಾಡುತ್ತೀಯೋ ಅದನ್ನು ನನಗೆ ಅರ್ಪಿಸುವುದು” ಎಂದು. ಇಲ್ಲಿ ಕೃಷ್ಣ ಹೇಳುತ್ತಿರುವುದು ನಮ್ಮ ಪ್ರತಿಯೊಂದು ಕ್ರಿಯೆಯ ಹಿಂದಿರಬೇಕಾದ ಅನುಸಂಧಾನವನ್ನು. ಈ ಕಾರ್ಯವನ್ನು ಭಗವಂತ ನನ್ನ ಕೈಯಿಂದ ಮಾಡಿಸಿದ-ಇದು ಅವನಿಗರ್ಪಿತವಾಗಲಿ ಎನ್ನುವ ಅನುಸಂಧಾನ. ಈ ರೀತಿ ಇದ್ದಾಗ ನಾವು ಭಗವಂತನ ಪೂರ್ಣಾನುಗ್ರಹಕ್ಕೆ ಪಾತ್ರರಾಗಬಹುದು. ಇಲ್ಲಿ ನಮ್ಮಲ್ಲಿರಬೇಕಾದ ಅತಿ ಮುಖ್ಯ ಅಂಶವೆಂದರೆ ಭಗವಂತನನ್ನು ಅನನ್ಯವಾಗಿ ಏಕನಿಷ್ಠೆಯಿಂದ ಉಪಾಸನೆ ಮಾಡುವುದು. ನಮ್ಮ ಸಾಧನೆಯಲ್ಲಿ ಕೊರತೆ ಇರಬಹುದು, ಇಂದ್ರಿಯ ನಿಗ್ರಹ ಕಷ್ಟವಾಗಬಹುದು, ಸರ್ವಭೂತ ಹಿತಚಿಂತನೆ ಆಗದೇ ಇರಬಹುದು, ಚಿಂತನೆಯಲ್ಲಿ ಲೋಪದೋಷಗಳಿರಬಹುದು, ಏಕಾಗ್ರತೆ ಬಾರದೇ ಇರಬಹುದು. ಆದರೆ ಇಲ್ಲಿ ಕೃಷ್ಣನ ಭರವಸೆ ಏನೆಂದರೆ “ನನ್ನಲ್ಲಿ ಶರಣಾಗು, ನಿನ್ನ ಮನಸ್ಸನ್ನು ನನ್ನಲ್ಲಿ ನೆಡು-ನಾನು ನಿನ್ನನ್ನು ಉದ್ಧರಿಸುತ್ತೇನೆ” ಎನ್ನುವುದು. ನಮ್ಮ ಚಿತ್ತದಲ್ಲಿ ಭಗವಂತನನ್ನು ನೆಲೆಗೊಳಿಸಿದಾಗ ಭಗವಂತ ನಮ್ಮನ್ನು ಈ ಹುಟ್ಟು ಸಾವಿನ ಸಂಸಾರ ಸಾಗರದಿಂದ ಪಾರು ಮಾಡುವ ಜವಾಬ್ಧಾರಿಯನ್ನು ವಹಿಸುತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *