ಶ್ಲೋಕ – 11
ಅಥೈತದಪ್ಯಶಕ್ತೋSಸಿ ಕರ್ತುಂ ಮದ್ಯೋಗಮಾಶ್ರಿತಃ ।
ಸರ್ವಕರ್ಮಫಲತ್ಯಾಗಂ ತತಃ ಕುರು ಯತಾತ್ಮವಾನ್ ॥೧೧॥
ಅಥ ಏತತ್ ಅಪಿ ಆಶಕ್ತಃ ಅಸಿ ಕರ್ತುಮ್ ಮತ್ ಯೋಗಮ್ ಆಶ್ರಿತಃ ।
ಸರ್ವಕರ್ಮ ಫಲ ತ್ಯಾಗಮ್ ತತಃ ಕುರು ಯತ ಆತ್ಮವಾನ್ –ಇದನ್ನೂ ಮಾಡುವುದಾಗದಿದ್ದರೆ ಎಲ್ಲ ಬಗೆಯ ಕರ್ಮಗಳನ್ನೂ ನನಗೆ ಅರ್ಪಿಸುವ ಸಾಧನೆ ಮಾಡು. ಅನಂತರ ಬಗೆಯನ್ನು ಬಿಗಿಗೊಳಿಸಿ ಎಲ್ಲ ಕರ್ಮಗಳ ಫಲದಾಸೆಯ ನಂಟನ್ನು ತೊರೆದುಬಿಡು.
ಒಂದು ವೇಳೆ ಮೇಲೆ ಹೇಳಿದ ರೀತಿ ಎಲ್ಲ ಕರ್ಮವನ್ನು ಭಗವಂತನಿಗೆ ಅರ್ಪಿಸಲು ಸಾಧ್ಯವಾಗದೇ ಇದ್ದರೆ, ಎಲ್ಲವನ್ನೂ ಭಗವಂತನ ಪೂಜೆಯಾಗಿ ಮಾಡಲು ಸಾಧ್ಯವಾಗದೇ ಇದ್ದರೆ, ಯಾರನ್ನಾದರೂ ಪೂಜಿಸು-ಆದರೆ ಕೊನೆಗೆ ಸರ್ವ ಕರ್ಮವನ್ನು ಕರ್ಮಫಲದ ಬಯಕೆಯಿಲ್ಲದೆ ಭಗವಂತನಿಗೆ ಅರ್ಪಿಸು ಎನ್ನುತ್ತಾನೆ ಕೃಷ್ಣ. ಇಲ್ಲಿ ಕರ್ಮಫಲದ ತ್ಯಾಗಕ್ಕೆ ಮತ್ತು ಅರ್ಪಣೆಗೆ ಕೃಷ್ಣ ಒತ್ತು ಕೊಟ್ಟಿದ್ದಾನೆ.