ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 32

ಯಥಾ ಸರ್ವಗತಂ ಸೌಕ್ಷ್ಮ್ಯಾದಾಕಾಶಂ ನೋಪಲಿಪ್ಯತೇ ।
ಸರ್ವತ್ರಾವಸ್ಥಿತೋ ದೇಹೇ ತಥಾSSತ್ಮಾ ನೋಪಲಿಪ್ಯತೇ ॥೩೨॥

ಯಥಾ ಸರ್ವಗತಮ್ ಸೌಕ್ಷ್ಮ್ಯಾತ್ ಆಕಾಶಮ್ ನ ಉಪಲಿಪ್ಯತೇ ।

ಸರ್ವತ್ರ ಅವಸ್ಥಿತಃ ದೇಹೇ ತಥಾ ಆತ್ಮಾ ನ ಉಪಲಿಪ್ಯತೇ –ಆಕಾಶ ಎಲ್ಲೆಡೆ ತುಂಬಿದ್ದರೂ ಏತಕ್ಕೂ ತಡೆಯಾಗದಷ್ಟು ನವುರಾದ್ದರಿಂದ ಏತರಿಂದಲೂ ಅಂಟಿಸಿಕೊಳ್ಳುವುದಿಲ್ಲ ಹೇಗೆ ಹಾಗೆ- ಪರಮಾತ್ಮ ಕೂಡ ಎಲ್ಲ ದೇಹಗಳಲ್ಲಿ ತುಂಬಿದ್ದರೂ ಅಂಟಿಕೊಳ್ಳುವುದಿಲ್ಲ.

ಎಲ್ಲ ಕಡೆ ಆಕಾಶವಿದೆ. ಅದಿಲ್ಲದ ಸ್ಥಳವಿಲ್ಲ. ಇಂಥಹ ಆಕಾಶ ಎಲ್ಲೆಡೆ ಇದ್ದೂ ಹೇಗೆ ಏನನ್ನೂ ಅಂಟಿಸಿಕೊಳ್ಳದೆ ಇರುತ್ತದೋ- ಹಾಗೆ ಭಗವಂತ ಎಲ್ಲ ದೇಹದಲ್ಲಿದ್ದರೂ ಏನನ್ನೂ ಅಂಟಿಸಿಕೊಳ್ಳದೆ ನಿರ್ಲಿಪ್ತನಾಗಿದ್ದಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 12

ಶ್ಲೋಕ – 01 ಹಿಂದಿನ ಅಧ್ಯಾಯದ ಕೊನೆಯಲ್ಲಿ ಭಗವಂತ “ನಿಷ್ಕಾಮ ಭಕ್ತಿಯಿಂದ ಮಾತ್ರ ನನ್ನನ್ನು ಕಾಣಲು ಸಾಧ್ಯ” ಎಂದು ಹೇಳಿದ. …

Leave a Reply

Your email address will not be published. Required fields are marked *