ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 03

ತತ್ ಕ್ಷೇತ್ರಂ ಯಚ್ಚ ಯಾದೃಕ್ ಚ ಯದ್ ವಿಕಾರಿ ಯತಶ್ಚ ಯತ್ ।
ಸ ಚ ಯೋ ಯತ್ ಪ್ರಭಾವಶ್ಚ ತತ್ ಸಮಾಸೇನ ಮೇ ಶೃಣು ॥೩॥

ತತ್ ಕ್ಷೇತ್ರಮ್ ಯತ್ ಚ ಯಾದೃಕ್ ಚ ಯತ್ ವಿಕಾರಿ ಯತಃ ಚ ಯತ್ ।

ಸಃ ಚ ಯಃ ಯತ್ ಪ್ರಭಾವಃ ಚ ತತ್ ಸಮಾಸೇನ ಮೇ ಶೃಣು – ಆ ಕ್ಷೇತ್ರವೆಂದರೇನು? ಅದು ಎಂಥದು? ಅದರ ವಿಕಾರಗಳೇನು? ಅದರ ಪ್ರೇರಕ ಶಕ್ತಿ ಯಾರು? ಅವನು ಎಂಥವನು ? ಅವನ ಹಿರಿಮೆಗಳೇನು? ಅದನ್ನು ಅಡಕವಾಗಿ ನನ್ನಿಂದ ಕೇಳು.

ಮೊದಲು ಕ್ಷೇತ್ರವೆಂದರೇನು? ಬ್ರಹ್ಮಾಂಡ ಮತ್ತು ಪಿಂಡಾಂಡ ಹೇಗೆ ಮತ್ತು ಯಾವುದರಿಂದ ನಿರ್ಮಾಣವಾಗಿದೆ? ಅದರ ಗುಣಧರ್ಮವೇನು? ಅದು ಯಾವ ಯಾವ ರೀತಿ ರೂಪಾಂತರಗೊಳ್ಳುತ್ತದೆ? ಈ ಬದಲಾವಣೆಗಳು ಹೇಗಾಗುತ್ತದೆ? ಯಾರಿಂದ ಆಗುತ್ತದೆ? ಇದೆಲ್ಲವನ್ನು ಸೂತ್ರರೂಪವಾಗಿ ಸಂಕ್ಷಿಪ್ತವಾಗಿ, ಚುಟುಕಾಗಿ ನನ್ನಿಂದ ಕೇಳು.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 12

ಶ್ಲೋಕ – 01 ಹಿಂದಿನ ಅಧ್ಯಾಯದ ಕೊನೆಯಲ್ಲಿ ಭಗವಂತ “ನಿಷ್ಕಾಮ ಭಕ್ತಿಯಿಂದ ಮಾತ್ರ ನನ್ನನ್ನು ಕಾಣಲು ಸಾಧ್ಯ” ಎಂದು ಹೇಳಿದ. …

Leave a Reply

Your email address will not be published. Required fields are marked *