ಫಾಲ್ಗುಣ ಮಾಸದ ಶುಕ್ಲ ಪಕ್ಷದ ಪೂರ್ಣಿಮೆಯಂದು ಹೋಳಿಹಬ್ಬ ಅಥವಾ ಕಾಮನಹಬ್ಬವನ್ನು ಆಚರಿಸುತ್ತೇವೆ. ಉತ್ತರ ಭಾರತದಲ್ಲಿ ಈ ಹಬ್ಬಕ್ಕೆ ಹೆಚ್ಚು ಮಹತ್ವವಿದೆ.
ಪುರಾಣ ಕಾರಣ
- ಪೂರ್ವದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದ. ದುರಹಂಕಾರಿಯೂ ಕ್ರೂರಿಯೂ ಆದ ತಾರಕಾಸುರನು ಲೋಕಕಂಟಕನಾಗಿ ಮೆರೆಯುತ್ತಿದ್ದ. ತನಗೆ ಮರಣವು ಬಾರದಿರಲಿ, ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಅಂದುಬ್ರಹ್ಮನಲ್ಲಿ ವರವನ್ನು ಬೇಡಿದ್ದ. ಭೋಗಸಮಾಧಿಯಲ್ಲಿದ್ದ ಶಿವ, ಪಾರ್ವತಿಯ ಜೊತೆ ಸಮಾಗಮ ಹೊಂದಲು ಸಾದ್ಯವಿರಲಿಲ್ಲ. ದೇವತೆಗಳು ನಿರುಪಾಯರಾಗಿ ಪಾರ್ವತಿಯಲ್ಲಿ ಮೋಹ ಹೊಂದುವಂತೆ ಮಾಡಲು ಕಾಮನಲ್ಲಿ ಬೇಡಿದರು.
- ಕಾಮ (ಮನ್ಮಥ) ಮತ್ತು ಅವನ ಪತ್ನಿ ರತಿದೇವಿ ಈ ಸತ್ಕಾರ್ಯಕ್ಕೆ ಒಪ್ಪಿದರು. ಭೋಗಸಮಾಧಿಯಲ್ಲಿದ್ದ ಶಿವನಿಗೆ ಹೂ ಬಾಣಗಳಿಂದ ಹೊಡೆದು ಸಮಾಧಿಯಿಂದ ಎಚ್ಚರಿಸಿದರು. ಇದರಿಂದ ಕುಪಿತಗೊಂಡ ಶಿವನು ತನ್ನ ಮೂರನೇ ಕಣ್ಣಿಂದ ಕಾಮನನ್ನು ಸುಟ್ಟು ಭಸ್ಮ ಮಾಡಿದನು. ರತಿದೇವಿ ದು:ಖದಿಂದ ಶಿವನಲ್ಲಿ ಪತಿಭಿಕ್ಷೆಯನ್ನು ಬೇಡಿದಳು.
- ಶಾಂತಗೊಂಡ ಶಿವನು ಪತ್ನಿಯೊಡನೆ ಮಾತ್ರ ಶರೀರಿಯಾಗುವಂತೆ ಕಾಮನಿಗೆ ವರ ಕೊಟ್ಟನು. ಲೋಕಕಲ್ಯಾಣಕ್ಕಾಗಿ ಮನ್ಮಥನು ಅನಂಗನಾದ. ಈ ಘಟನೆ ನಡೆದದ್ದು ಫಾಲ್ಗುಣ ಶುದ್ಧ ಪೂರ್ಣಿಮೆಯಂದು. ಆದ್ದರಿಂದ ಈ ದಿನವನ್ನು “ಕಾಮನ ಹುಣ್ಣಿಮೆ”ಯಾಗಿ ಆಚರಿಸಲ್ಪಡುತ್ತದೆ.
ಆಚರಣೆ
- ಈ ದಿನದಂದು ಅಕ್ಕಿಹಿಟ್ಟು ಮತ್ತು ಅರಿಶಿನ ಬೆರೆಸಿದ ಗುಲಾಲು ತಯಾರಿಸಿ, ಬಿದಿರಿನಿಂದ ಪಿಚಕಾರಿ ತಯಾರಿಸಿ ಬಣ್ಣದಾಟ ಆಡುವರು. ರಂಗಿನಾಟದ ನಂತರ ಅಭ್ಯಂಜನ ಸ್ನಾನ ಮಾಡಿ ದೇವರಲ್ಲಿ ಪ್ರಾರ್ಥಿಸಿ ಮನೆಗಳಲ್ಲಿ ವಿಶೇಷ ಅಡಿಗೆಗಳನ್ನು ತಯಾರಿಸುವರು. ಉತ್ತರ ಪ್ರದೇಶದಲ್ಲಿ ಜೋಳದ ಹಿಟ್ಟಿನ ಗುಜಿಯಾ ಹಾಗೂ ಪಾಪ್ಡಿ ಜನಪ್ರಿಯವಾಗಿದೆ.
- ದೆಹಲಿಯಲ್ಲಿ ಈ ದಿನದಂದು ಹತ್ತು ತಲೆಯ ರಾವಣನ ಮೂರ್ತಿಯನ್ನು ಬಿದಿರಿನಿಂದ ತಯಾರಿಸಿ, ಅದಕ್ಕೆ ಹಳೇ ಬಟ್ಟೆಗಳನ್ನೇಲ್ಲ ಧರಿಸಿ ಗಣ್ಯರನ್ನೇಲ್ಲ ಕರೆದು, ಅವರ ಸಮ್ಮುಖದಲ್ಲಿ ಲಂಕೇಶನನ್ನು ಸುಡುವುದು ವಾಡಿಕೆ.
- ಗ್ರಾಮೀಣ ಪ್ರದೇಶಗಳಲ್ಲಿ ಆ ದಿನ ಊರಿನವರ ಮನೆಯಲ್ಲಿ ಸಿಗುವ ಬೇಡದ ವಸ್ತುಗಳನ್ನೆಲ್ಲ ತಂದು ಒಂದೆಡೆ ಗುಡ್ಡೆ ಮಾಡಿ, ರಾತ್ರಿ ಹುಡುಗನೊಬ್ಬನಿಗೆ ಶಿಖಂಡಿಯ ವೇಷ ಹಾಕಿಸಿ, ಅವನಿಂದ ಊರಿನ ಐದು ಮನೆಗಳಲ್ಲಿ ಭಿಕ್ಷೆ ಬೇಡಿಸಿ ಕರೆತಂದು ಅವನಿಂದ ಆ ಬೇಡದ ವಸ್ತುಗಳ ಗುಡ್ಡೆಗೆ ಬೆಂಕಿ ಇಡಿಸುತ್ತಾರೆ. ಅದೇ ಅವರ ಕಾಮದಹನದ ಹಬ್ಬ.
ಶ್ರೇಯಾಂಕ
ಮತ ನೀಡಿ, ಬಲಪಡಿಸಿ ಮತ್ತು ಸಾಮಾಜಿಕ ಜಾಲ ತಾಣದಲ್ಲಿ ಹಂಚಿರಿ.