ಭಗವದ್ಗೀತೆ ಶ್ಲೋಕಗಳು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ ಅಧ್ಯಾಯ. ಈ ಹಿಂದಿನ ಹನ್ನೆರಡು ಅಧ್ಯಾಯಗಳಲ್ಲಿ ಏನು ಹೇಳಲಾಗಿದೆ ಅವೆಲ್ಲವನ್ನು ಸಂಗ್ರಹ ಮಾಡಿ ಈ ಅಧ್ಯಾಯದಲ್ಲಿ ಹೇಳಲಾಗಿದೆ. ಆದ್ದರಿಂದ ಹಿಂದಿನ ಎರಡು ಷಟ್ಕಗಳಲ್ಲಿ ಕಂಡ ವಿಷಯಗಳ ಪೂರ್ಣ ವಿಶ್ಲೇಷಣೆ ಈ ಅಧ್ಯಾಯ. ಜಡಪ್ರಪಂಚ, ಅದರಲ್ಲಿ ಪ್ರಕೃತಿಯಲ್ಲಿ ಬದ್ಧನಾಗಿ, ಪ್ರಕೃತಿಯಿಂದ ಪಾರಾಗಲು ಬಯಸುವ ಜೀವ. ಪಾರಾಗುವುದಕ್ಕೊಸ್ಕರ ಜ್ಞಾನದ ಅನುಸಂಧಾನ ಮತ್ತು ಸಾಧನೆ- ಈ ಎಲ್ಲಾ ವಿಷಯಗಳನ್ನು ನಾವು ಹಿಂದಿನ ಅಧ್ಯಾಯಗಳಲ್ಲಿ ವಿಕ್ಷಿಪ್ತವಾಗಿ ನೋಡಿದ್ದೇವೆ. ಅದೆಲ್ಲವುದರ …

ಪೂರ್ತಿ ಓದಿ...

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 12

ಶ್ಲೋಕ – 01 ಹಿಂದಿನ ಅಧ್ಯಾಯದ ಕೊನೆಯಲ್ಲಿ ಭಗವಂತ “ನಿಷ್ಕಾಮ ಭಕ್ತಿಯಿಂದ ಮಾತ್ರ ನನ್ನನ್ನು ಕಾಣಲು ಸಾಧ್ಯ” ಎಂದು ಹೇಳಿದ. ಹೀಗೆ ಹೇಳಿದಾಗ-ಯಾವ ರೀತಿ ಭಗವಂತನಲ್ಲಿ ನಾವು ಭಕ್ತಿ ಮಾಡಬೇಕು, ಯಾವುದು ನಿಜವಾದ ಭಕ್ತಿ, ಭಕ್ತನಲ್ಲಿರಬೇಕಾದ ಗುಣಗಳೇನು, ಇತ್ಯಾದಿ ಪ್ರಶ್ನೆ ನಮ್ಮಲ್ಲಿ ಮೂಡುತ್ತದೆ. ಪ್ರಶ್ನೋಪನಿಷತ್ತಿನಲ್ಲಿ ಹೇಳುವಂತೆ: ಸ ಪ್ರಾಣಮಸೃಜತ ಪ್ರಾಣಾಚ್ಛ್ರದ್ಧಾಂ ಖಂ ವಾಯುರ್ಜ್ಯೋತಿರಾಪಃ ಪೃಥಿವೀಂದ್ರಿಯಂ ಮನಃ | ಅನ್ನಮನ್ನಾದ್ವೀರ್ಯಂ ತಪೋ ಮಂತ್ರಾಃ ಕರ್ಮ ಲೋಕಾ ಲೋಕೇಷು ಚ ನಾಮ ಚ || ೪|| ಭಗವಂತ ಈ ಪ್ರಪಂಚವನ್ನು ಸೃಷ್ಟಿ ಮಾಡಿ, ಹದಿನೈದು ಬೇಲಿಗಳ ಈ …

ಪೂರ್ತಿ ಓದಿ...

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 11

ಶ್ಲೋಕ – 01 ಈ ಅಧ್ಯಾಯ ಭಗವಂತನ ಉಪಾಸನೆ ಮಾಡುವಾಗ ಆತನನ್ನು ಹೇಗೆ ಚಿಂತನೆ ಮಾಡಬೇಕು ಎಂದು ಹೇಳುವ ಅಧ್ಯಾಯ. ಇದು ಭಗವಂತನ ವಿಶ್ವರೂಪ ದರ್ಶನ ಅಧ್ಯಾಯ. ಕೃಷ್ಣ ಅರ್ಜುನನಿಗೆ ದಿವ್ಯನೇತ್ರವನ್ನು ಕರುಣಿಸಿ ತನ್ನ ವಿಶ್ವರೂಪ ದರ್ಶನ ಮಾಡಿಸುತ್ತಾನೆ. ಆ ವಿಶ್ವರೂಪದ ವರ್ಣನೆ ಇಲ್ಲಿದೆ. ಇಲ್ಲಿ ಸರ್ವವ್ಯಾಪ್ತ, ಸರ್ವಾಂತರ್ಯಾಮಿ, ಸರ್ವಸಮರ್ಥ ಭಗವಂತನ ಚಿಂತನೆ ಹೇಗೆ ಮಾಡಬೇಕು ಎನ್ನುವ ಮಾರ್ಗದರ್ಶನವಿದೆ. ಭಗವಂತನ ರೂಪವನ್ನು ಯಾವುದೋ ಒಂದು ಲೌಕಿಕ ಅನುಭವದೊಂದಿಗೆ ಸಮೀಕರಿಸಲು ಸಾಧ್ಯವಿಲ್ಲ. ಅದು ಲೋಕಾತೀತ ಅನುಭವ. ಆ ಅದ್ಭುತ ಅನುಭವದ ಚಿತ್ರಣ ಈ ಅಧ್ಯಾಯ. ಭಗವಂತನ …

ಪೂರ್ತಿ ಓದಿ...

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 10

ಶ್ಲೋಕ – 01 ನಾವು ಉಪಾಸನೆ ಮಾಡಬೇಕಾದ ಭಗವಂತನ ಗುಣವನ್ನು, ಜ್ಞಾನ ವಿಜ್ಞಾನವನ್ನು ಅರ್ಜುನನಿಗೆ ವಿವರಿಸಿದ ಕೃಷ್ಣ, ಆತನಲ್ಲಿ ಅರಳಿದ ಜ್ಞಾನ ತೃಷೆಯನ್ನು, ಪೂರ್ಣ ನಿಷ್ಠೆಯನ್ನು ಗುರುತಿಸಿ-ವಿಶೇಷವಾಗಿ ಉಪಾಸನೆಯಲ್ಲಿ ಅಳವಡಿಸಿಕೊಳ್ಳಬೇಕಾದ ಅನುಸಂಧಾನವನ್ನು, ಭಗವಂತನ ವಿಭೂತಿಯನ್ನು ಈ ಅಧ್ಯಾಯದಲ್ಲಿ ವಿವರಿಸುತ್ತಾನೆ. ಸಾಮಾನ್ಯವಾಗಿ ಅಮೂಲ್ಯ ವಿದ್ಯೆಯನ್ನು ಗುರು ಸುಲಭವಾಗಿ ಬಹಿರಂಗಗೊಳಿಸುವುದಿಲ್ಲ. ಶಿಷ್ಯ ಗುರುವಿನಲ್ಲಿ ಪೂರ್ಣ ನಿಷ್ಠೆ ತೋರಿದಾಗ, ಆತನಲ್ಲಿ ಯೋಗ್ಯತೆ ಇದ್ದಾಗ ಮಾತ್ರ ಅಂತಹ ವಿಚಾರವನ್ನು ಬಿಚ್ಚಬೇಕು ಎನ್ನುತ್ತದೆ ಶಾಸ್ತ್ರ. ಹೀಗಾಗಿ ಗುರು ತನ್ನ ಶಿಷ್ಯನನ್ನು ಪರೀಕ್ಷೆ ಮಾಡದೆ ಅಮೂಲ್ಯ ವಿಚಾರವನ್ನು ಆತನಿಗೆ ಹೇಳುವುದಿಲ್ಲ. ಇದಕ್ಕೆ ಉತ್ತಮ …

ಪೂರ್ತಿ ಓದಿ...

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 09

ಶ್ಲೋಕ – 01 ಜ್ಞಾನ ಎಂದರೆ ಭಗವಂತನ ಅರಿವು (Spiritual wisdom). ಎಲ್ಲವನ್ನು ತಿಳಿದ ಭಗವಂತನೆಡೆಗೆ ನಮ್ಮ ಮನಸ್ಸು ಹರಿಯುವುದು ಜ್ಞಾನ. ಭಗವಂತ ಸರ್ವೋತ್ತಮ, ಭಗವಂತ ಸರ್ವಗತ, ಭಗವಂತ ಸರ್ವಜ್ಞ, ಇತ್ಯಾದಿಯಾಗಿ ತಿಳಿಯುವುದು ಜ್ಞಾನ. ಆ ನಂತರ ಅದರ ವಿವರಗಳ ಅರಿವು ವಿಜ್ಞಾನ (ವಿಶಿಷ್ಟವಾದ ಜ್ಞಾನ). ಭಗವಂತ ಗುಣಪೂರ್ಣ ಎನ್ನುವುದು ಜ್ಞಾನ. ಭಗವಂತ ಜ್ಞಾನಪೂರ್ಣ, ಭಗವಂತ ಆನಂದಪೂರ್ಣ, ಭಗವಂತ ಸೌಂದರ್ಯಪೂರ್ಣ, ಭಗವಂತ ದಯಾಪೂರ್ಣ, ಹೀಗೆ ಒಂದೊಂದು ಗುಣಗಳ ಪೂರ್ಣತೆಯನ್ನು ವಿವರವಾಗಿ ಅನುಸಂಧಾನ ಮಾಡುವುದು ವಿಜ್ಞಾನ (exclusive wisdom of God). ನಾವು ದೇವರನ್ನು ಪೂರ್ಣವಾಗಿ …

ಪೂರ್ತಿ ಓದಿ...

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 08

ಶ್ಲೋಕ – 01 ಏಳನೆಯ ಅಧ್ಯಾಯದ ಕೊನೆಯಲ್ಲಿ ಕೃಷ್ಣ ಸಂಕ್ಷಿಪ್ತವಾಗಿ ಆರು ಮಹತ್ವದ ಸಂಗತಿಯನ್ನು ಮನುಷ್ಯ ತಿಳಿದಿರಬೇಕು ಎಂದು ಹೇಳಿದ್ದ. ಅಧ್ಯಾತ್ಮ, ಅಧಿಭೂತ, ಅಧಿದೈವ, ಅಧಿಯಜ್ಞ, ಬ್ರಹ್ಮ, ಕರ್ಮ-ಈ ಆರು ಸಂಗತಿಗಳನ್ನು ತಿಳಿದರೆ ಅದರಿಂದ ಮೇಲಕ್ಕೆ ಏರುವ ಇನ್ನೊಂದು ಮೆಟ್ಟಲಿರುವುದಿಲ್ಲ ಎಂದಿದ್ದ ಕೃಷ್ಣ. ಅಧಿಭೂತ ಎಂದರೆ ಭೌತಿಕ ಪ್ರಪಂಚ, ಅಧ್ಯಾತ್ಮ ಎಂದರೆ ಜಡದೊಳಗಿರುವ ಚೈತನ್ಯ, ಅಧಿದೈವ ಎಂದರೆ ಚೇತನವನ್ನು ನಿಯಂತ್ರಿಸುವ ದೇವತಾಶಕ್ತಿ, ಅಧಿಯಜ್ಞ ಎಂದರೆ ದೇವತೆಗಳನ್ನು ನಿಯಂತ್ರಿಸುವ ಭಗವಂತ, ಈ ಅಧಿಯಜ್ಞ ಜಗತ್ತಿನಲ್ಲೆಲ್ಲಾ ತುಂಬಿದ್ದಾನೆ ಎನ್ನುವುದು ಬ್ರಹ್ಮ ಕಲ್ಪನೆ, ಅವನಿಂದಲೇ ಎಲ್ಲಾ ಕ್ರಿಯೆಗಳೂ ನಡೆಯುತ್ತವೆ-ಆತನೇ …

ಪೂರ್ತಿ ಓದಿ...

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 07

ಶ್ಲೋಕ – 01 ಹಿಂದಿನ ಆರು ಅಧ್ಯಾಯ (ಮೊದಲ ಷಟ್ಕ)ದಲ್ಲಿ ಕೃಷ್ಣ ಸಾಧಕನಾದವನು ಯಾವ ರೀತಿ ಸಾಧನೆಗೆ ತೊಡಗಬೇಕು, ಕರ್ಮ ಹೇಗಿರಬೇಕು, ಧ್ಯಾನ ಹೇಗಿರಬೇಕು, ಇತ್ಯಾದಿ ಭಗವಂತನನ್ನು ತಿಳಿಯುವ ಸಾಧನದ ಬಗ್ಗೆ ಹೇಳಿದ. ಎರಡನೇ ಷಟ್ಕ (ಅ-೭ರಿಂದ ೧೨) ಸಾಧನೆಯ ಮೂಲಕ ನಾವು ತಿಳಿದುಕೊಳ್ಳಬೇಕಾದ ಭಗವಂತನ ಸ್ವರೂಪವನ್ನು, ವಿಭೂತಿಯನ್ನು, ವೈಭವವನ್ನು, ಆತನ ಮಹಿಮೆಯನ್ನು ಹೇಳುವ ಸಾಧ್ಯಾಧ್ಯಾಯ. ಏಳನೇ ಅಧ್ಯಾಯ ಭಗವಂತನ ಅಮೃತ ನುಡಿಯಿಂದ ಪ್ರಾರಂಭವಾಗುತ್ತದೆ. ಭಗವಾನುವಾಚ । ಮಯ್ಯಾಸಕ್ತಮನಾಃ ಪಾರ್ಥ ಯೋಗಂ ಯುಂಜನ್ ಮದಾಶ್ರಯಃ । ಅಸಂಶಯಂ ಸಮಗ್ರಂ ಮಾಂ ಯಥಾ ಜ್ಞಾಸ್ಯಸಿ ತಚ್ಛೃಣು …

ಪೂರ್ತಿ ಓದಿ...

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 06

ಶ್ಲೋಕ – 01 ಹಿಂದಿನ ಅಧ್ಯಾಯದಲ್ಲಿ ಮುಖ್ಯವಾಗಿ ಭಗವಂತನ ಉಪಾಸನೆಯ ಸಾಧನೆಯನ್ನು ವಿವರಿಸಿದ ಕೃಷ್ಣ ಈಗ ಆರನೇ ಅಧ್ಯಾಯದಲ್ಲಿ ಧ್ಯಾನಯೋಗ ಮತ್ತು ಧ್ಯಾನಸಮಾಧಿಯನ್ನು ತಳಸ್ಪರ್ಶಿಯಾಗಿ ವಿವರಿಸುತ್ತಾನೆ. ಭಗವಾನುವಾಚ । ಅನಾಶ್ರಿತಃ ಕರ್ಮಫಲಂ ಕಾರ್ಯಂ ಕರ್ಮ ಕರೋತಿ ಯಃ । ಸ ಸಂನ್ಯಾಸೀ ಚ ಯೋಗೀ ಚ ನ ನಿರಗ್ನಿರ್ನ ಚಾಕ್ರಿಯಃ ॥೧॥ ಭಗವಾನುವಾಚ- ಭಗವಂತ ಹೇಳಿದನು : ಅನಾಶ್ರಿತಃ ಕರ್ಮ ಫಲಮ್ ಕಾರ್ಯಮ್ ಕರ್ಮ ಕರೋತಿ ಯಃ । ಸಃ ಸಂನ್ಯಾಸೀ ಚ ಯೋಗೀ ಚ ನ ನಿಃ ಅಗ್ನಿಃ ನ ಚ ಅಕ್ರಿಯಃ …

ಪೂರ್ತಿ ಓದಿ...

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 05

ಶ್ಲೋಕ – 01 ನಾಲ್ಕನೆ ಅಧ್ಯಾಯದಲ್ಲಿ ಕೃಷ್ಣ ಕರ್ಮಯೋಗದ ಬಗ್ಗೆ ಹೇಳಿದ ಹಾಗು ಕೊನೆಯಲ್ಲಿ ಕರ್ಮಸನ್ಯಾಸದ ಬಗ್ಗೆಯೂ ಹೇಳಿದ. ಇಲ್ಲಿ ನಮಗೆ ಸ್ವಲ್ಪ ಗೊಂದಲವಾಗುತ್ತದೆ. ಇದನ್ನು ಸಂಪೂರ್ಣ ಅರ್ಥ ಮಾಡಿಕೊಳ್ಳಬೇಕಾದರೆ ಮೊದಲು ಕರ್ಮಯೋಗ ಮತ್ತು ಕರ್ಮಸಂನ್ಯಾಸ ಅಂದರೆ ಏನು ಎಂದು ತಿಳಿಯಬೇಕು. ಮೇಲ್ನೋಟಕ್ಕೆ ನಮಗೆ ಕರ್ಮಸಂನ್ಯಾಸ ಅಂದರೆ ‘ಕರ್ಮತ್ಯಾಗ’ ಎನ್ನುವಂತೆ ಕಾಣುತ್ತದೆ. ಆದರೆ ಕೃಷ್ಣ ನಾಲ್ಕನೇ ಅಧ್ಯಾಯದ ಕೊನೆಯಲ್ಲಿ “ಎದ್ದು ನಿಲ್ಲು- ಯುದ್ಧ ಮಾಡು” ಎಂದು ಅರ್ಜುನನನ್ನು ಕರ್ಮ ಮಾಡುವಂತೆ ಹುರಿದುಂಬಿಸಿದ್ದನ್ನು ನಾವು ಕಂಡಿದ್ದೇವೆ. ಇದರಿಂದ ಕರ್ಮಸಂನ್ಯಾಸ ಅಂದರೆ ಕರ್ಮತ್ಯಾಗವಲ್ಲ ಎನ್ನುವುದು ನಮಗೆ ಸ್ಪಷ್ಟವಾಗುತ್ತದೆ. …

ಪೂರ್ತಿ ಓದಿ...

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 04

ಶ್ಲೋಕ – 01 ಹಿಂದೆ ಕೃಷ್ಣ ಜ್ಞಾನಮಾರ್ಗ ಮತ್ತು ಕರ್ಮಮಾರ್ಗದ ಬಗ್ಗೆ ಎರಡನೇ ಅಧ್ಯಾಯದಲ್ಲಿ ಪ್ರಸ್ತಾಪಿಸಿ, ಆ ನಂತರ ಮೂರನೇ ಅಧ್ಯಾಯದಲ್ಲಿ ಕರ್ಮಯೋಗದ ವಿಸ್ತಾರವನ್ನು ತಿಳಿಸಿದ. ನಾಲ್ಕನೇ ಅಧ್ಯಾಯದಲ್ಲಿ ಭಗವಂತನ ಜ್ಞಾನದ ಅರಿವಿನ ಮುಖ ಮತ್ತು ಕರ್ಮದ ಪ್ರಭೇದಗಳನ್ನು ಕೃಷ್ಣ ವಿವರಿಸುತ್ತಾನೆ. ಹಿಂದೆ ಹೇಳಿದ ಜ್ಞಾನಯೋಗ ಮತ್ತು ಕರ್ಮಯೋಗವನ್ನೇ ವಿಸ್ತರಿಸಿ ಜ್ಞಾನದ ಮಹತ್ವ ಮತ್ತು ಕರ್ಮದ ಪ್ರಭೇದಗಳ ಜೊತೆಗೆ ಈ ಎರಡು ಮಾರ್ಗದಿಂದ ನಾವು ಪಡೆಯತಕ್ಕಂತಹ ಭಗವಂತನ ಮಹಿಮೆ- ಇದನ್ನು ಈ ಅಧ್ಯಾಯದಲ್ಲಿ ಕಾಣಬಹುದು. ಈ ಅಧ್ಯಾಯ ಕೃಷ್ಣನ ಮಾತಿನೊಂದಿಗೆ ಆರಂಭವಾಗುತ್ತದೆ. ಭಗವಾನುವಾಚ । …

ಪೂರ್ತಿ ಓದಿ...