ಕೆರೆಮನೆ ಎಂದಾಕ್ಷಣ ಮನಸ್ಸಿಗೆ ಹೊಳೆಯುವುದು ಯಕ್ಷಗಾನ. ಅಂಥ ಮನೆತನ ಮತ್ತು ಕಲೆಯ ಅನರ್ಘ್ಯ ಪರಂಪರೆಯ ಕೊಂಡಿಯಾಗಿದ್ದವರು ಮಹಾಬಲರ ಹೆಗಡೆ. ಮಹಾಬಲರು ಹುಟ್ಟಿದ್ದು ಜೂನ್ 30, 1927ರ ವರ್ಷದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ. ತಂದೆ ತಾಯಿ ಶ್ರೀರಾಮ ಹೆಗಡೆ ತಾಯಿ ಮಾದೇವಿ. ಮಹಾಬಲರು ಚಿತ್ರಾಪುರದ ಶ್ರೀಪಾದರಾಯರಿಂದ ಹಿಂದೂಸ್ಥಾನಿ ಸಂಗೀತದ ಪ್ರಾರಂಭಿಕ ಅಭ್ಯಾಸ ನಡೆಸಿದ ನಂತರದಲ್ಲಿ ಧಾರಾವಾಡದ ನಾರಾಯಣ ಮುಜುಂದಾರರಿಂದ ಹೆಚ್ಚಿನ ಸಂಗೀತ ಶಿಕ್ಷಣ ಪಡೆದರು. ಶಾಲೆಯಲ್ಲಿ ಕಲಿತದ್ದು ನಾಲ್ಕನೇ ತರಗತಿಯವರೆಗೆ ಮಾತ್ರ. ಬಾಲ್ಯದಲ್ಲೇ ತಾಯಿಯಿಲ್ಲದ ತಬ್ಬಲಿ. ಅಪ್ಪಟ ತುಂಟ. ಪುಂಡಾಟ. ಆದರೆ ಚಿಕ್ಕಪ್ಪ ಕೆರೆಮನೆ ಶಿವರಾಮ …
ಪೂರ್ತಿ ಓದಿ...ಇಡಗುಂಜಿ ಕೃಷ್ಣ ಯಾಜಿ
ವೇಷಧಾರಿಯಾಗಿ ಯಕ್ಷ ರಂಗಕ್ಕೆ ಕಾಲಿಟ್ಟ ಇಡಗುಂಜಿ ಕೃಷ್ಣ ಯಾಜಿ ನಂತರದಲ್ಲಿ ಹೆಸರು ಮಾಡಿದ್ದು ಚಂಡೆ ವಾದಕರಾಗಿ. 40 ವರ್ಷಗಳಿಂದ ಚಂಡೆ ವಾದಕರಾಗಿದ್ದರೂ ‘ಸಾಧನೆ ಸಾಲದು’ ಎಂಬ ಭಾವ ಅವರದು. ಈ ಸಾಧಕರನ್ನು ಬೆಂಗಳೂರಿನಲ್ಲಿ ನಾಳೆ ಸನ್ಮಾನಿಸಲಾಗುತ್ತಿದೆ. ಯಕ್ಷ ರಂಗವನ್ನು ಪ್ರವೇಶಿಸಿದ್ದು ವೇಷಧಾರಿಯಾಗಿ. ಶುರುವಾದದ್ದು ಕೋಡಂಗಿ, ಬಾಲಗೋಪಾಲ, ಪೀಠಿಕಾ ಸ್ತ್ರೀ ವೇಷದಿಂದ. ನಂತರ ಸುಬ್ರಹ್ಮಣ್ಯ, ಚಂದ್ರಹಾಸ, ಅಭಿಮನ್ಯು, ಅರ್ಜುನ ಮುಂತಾದ ವೇಷಗಳು ಬರಲಾರಂಭಿಸಿದವು. ಇದ್ದಕ್ಕಿದ್ದಂತೆ ತಿರುವು ಪಡೆದ ಕಲಾಜೀವನ ಅವರನ್ನು ಬಡಗುತಿಟ್ಟಿನ ಖ್ಯಾತ ಚಂಡೆ ವಾದಕರನ್ನಾಗಿ ರೂಪಿಸಿತು. ಹೊನ್ನಾವರ ತಾಲೂಕಿನ ಇಡಗುಂಜಿಯ ಕೃಷ್ಣ ಯಾಜಿ ಅವರದು …
ಪೂರ್ತಿ ಓದಿ...ಕೆರೆಮನೆ ಶಿವರಾಮ ಹೆಗಡೆ
ಅದು ಸೂರ್ಯೋದಯದ ಸಮಯ. ಶರಾವತಿ ನದಿ ದಂಡೆಯಲ್ಲಿ ನಿಂತು ಕಿಸೆಗೆಕೈಹಾಕಿದರೆ ಒಂದು ಪಾವಲಿಯೂ ಇಲ್ಲ. ಆ ಕಾಲದಲ್ಲಿ ಹೊಳೆ ದಾಟಲುದೋಣಿಯವನಿಗೆ ಒಂದಾಣೆ ಕೊಡಬೇಕಿತ್ತು. ಆ ವ್ಯಕ್ತಿ ಚಿಂತಿಸಲಿಲ್ಲ. ನೇರ ದುರ್ಗಾಕೇರಿಯ (ಹೊನ್ನಾವರ) ಕಾಸಿಂ ಸಾಹೇಬನ ಬೀಡಿ ಅಂಗಡಿಗೆ ತೆರಳಿ ಬಾಗಿಲು ತಟ್ಟಿದ. ವಿಷಯ ತಿಳಿಸಿದಾಗ ಕಾಸಿಂ ದುಡ್ಡು ತೆಗೆದಿಟ್ಟ. ಸಾಮಾನ್ಯರಾಗಿದ್ದರೆ ಅದನ್ನು ಎತ್ತಿಕೊಂಡು ಹೊರಡುತ್ತಿದ್ದರು. ಆದರೆ ಹಣದ ಅಗತ್ಯವಿದ್ದವ ಅಪ್ಪಟ ಸ್ವಾಭಿಮಾನಿ. ಬ್ಯಾಡ್ವೋ ಸೈಬ. ಒಂದಾಣೆಯಷ್ಟು ಬೀಡಿ ಕಟ್ಟಿ ಕೊಡ್ತೇನೆ ಎಂದ. ಬೀಡಿ-ಗೀಡಿ ಏನೂ ಬ್ಯಾಡ ಮಾಣಿ, ರೊಕ್ಕ ತಗಂಡು ಹೋಗೆಂದು ಕಾಸಿಂ ಜಬರ್‌ದಸ್ತ್ …
ಪೂರ್ತಿ ಓದಿ...ಮಲ್ಪೆ ರಾಮದಾಸ ಸಾಮಗ
ಇಪ್ಪತ್ತನೇ ಶತಮಾನದ ಯಕ್ಷಗಾನ ಲೋಕ ಇಬ್ಬರು ಹಿರಿಯ ಕಲಾವಿದರನ್ನು ಕಂಡಿದೆ. ಇವರಲ್ಲಿ ದೊಡ್ಡ ಸಾಮಗ ಅಂದರೆ ಮಲ್ಪೆ ಶಂಕರನಾರಾಯಣ ಸಾಮಗ ಮತ್ತೊಬ್ಬರು ಸಣ್ಣ ಸಾಮಗರೆಂದೇ ಖ್ಯಾತರಾದ ಅವರ ತಮ್ಮ ಮಲ್ಪೆ ರಾಮದಾಸ ಸಾಮಗ. ದೊಡ್ಡ ಸಾಮಗರು ಸ್ವಾತಂತ್ರ್ಯ ಹೋರಾಟಗಾರರಾಗಿ, ಕಲಾವಿದರಾಗಿ ಅಸಾಧಾರಣ ಕೊಡುಗೆಯನ್ನಿತ್ತು ಯಕ್ಷರಂಗವನ್ನು ಸುಮಾರು 4 ದಶಕಗಳ ಕಾಲ ಆಳಿ ಹೋದವರು. ಸ್ವತಃ ಶೇಣೀ ಗೋಪಾಲಕೃಷ್ಣ ಭಟ್ಟರೂ ಕೂಡಾ ಅವರನ್ನು ‘ಗುರು’ ಎಂದೇ ಸಂಬೋಧಿಸುತ್ತಿದ್ದರು. ಅವರ ತಮ್ಮ ಸಣ್ಣ ಸಾಮಗರೋ ಶೇಣಿ ಅವರೊಂದಿಗಿನ ತಾಳಮದ್ದಲೆಗಳಿಗೆ ಒಳ್ಳೆಯ ಜೊತೆ. ಈ ಪ್ರತಿಭಾವಂತ ಸಾಮಗ …
ಪೂರ್ತಿ ಓದಿ...ಶೇಣಿ ಗೋಪಾಲಕೃಷ್ಣ ಭಟ್
ಯಕ್ಷಗಾನ ಕ್ಷೇತ್ರದ ಮಾತಿನ ಮಾಂತ್ರಿಕ, ವೇಷಧಾರಿ, ಪ್ರಸಂಗಕರ್ತೃ, ಮೇಳದಯಜಮಾನ ಹೀಗೆ ಹಲವು ಹತ್ತು ಮುಖಗಳ ಪ್ರತಿಭೆಯ ಸಂಗಮರಾಗಿದ್ದ ಗೋಪಾಲಕೃಷ್ಣ ಭಟ್ಟರು ಕಾಸರಗೋಡು ತಾಲ್ಲೂಕಿನ ಕುಂಬಳೆಯ ಎಡನಾಡುಗ್ರಾಮದಲ್ಲಿ ಏಪ್ರಿಲ್ 7, 1918ರಲ್ಲಿ ಜನಿಸಿದರು. ತಂದೆ ನಾರಾಯಣಭಟ್ಟರು, ತಾಯಿ ಲಕ್ಷ್ಮೀಅಮ್ಮನವರು. ಗೋಪಾಲಕೃಷ್ಣ ಭಟ್ಟರು ಮೂರು ವರ್ಷ ತುಂಬುವ ಮುನ್ನವೇ ಪಿತೃವಾತ್ಸಲ್ಯದಿಂದ ವಂಚಿತರಾದರು. ತಾಯಿ, ಅಜ್ಜಿಯ ಆಸರೆಯಲ್ಲಿ ಬದುಕು ನಡೆಯಿತು. ತಾಯಿ ಕುಮಾರವ್ಯಾಸ ಭಾರತ, ತೊರವೆ ರಾಮಾಯಣ, ಭಾಗವತ ಗ್ರಂಥಗಳ ಸುಶ್ರಾವ್ಯ ಹಾಡುಗಾರ್ತಿ. ಭಟ್ಟರು ಬೇಳದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ನಡೆಯುತ್ತಿದ್ದಾಗಲೇ ‘ಶ್ರೀ ಸುಬ್ರಹ್ಮಣ್ಯ ಕೃಪಾ ಪೋಷಿತ ನಾಟಕ’ ಮಂಡಲಿಯ …
ಪೂರ್ತಿ ಓದಿ...ಕೆರೆಮನೆ ಶಂಭು ಹೆಗಡೆ
ಯಕ್ಷ ರಂಗದ ಅಭಿಜಾತ ಕಲಾವಿದ ಶಂಭು ಹೆಗಡೆ ಅವರು ಅಕ್ಟೋಬರ್ 6, 1938ರಲ್ಲಿ ಕೆರೆಮನೆ ಶಿವರಾಮ ಹೆಗಡೆ ಹಾಗು ಮುಕಾಂಬೆ ದಂಪತಿಗಳ ಪುತ್ರರಾಗಿ ಜನಿಸಿದರು. ಅವರು ಪುರುಷ ಸ್ತ್ರೀ ವೇಷಗಳೂ ಸೇರಿದಂತೆ ಸುಮಾರು 175 ಪಾತ್ರಗಳಲ್ಲಿ, 5000ಕ್ಕೂ ಪ್ರದರ್ಶನಗಳಲ್ಲಿ ವಿಶ್ವದಾದ್ಯಂತ ಪ್ರದರ್ಶನಗಳನ್ನು ನೀಡಿದವರು. ಖ್ಯಾತ ನೃತ್ಯ ಕಲಾವಿದೆ ಮಾಯಾರಾವ್ ಅವರಲ್ಲಿ ಕೊರಿಯೋಗ್ರಫಿಯ ತಂತ್ರಗಳನ್ನೂ ಕಲಿತ ಅವರು ಅರ್ಧ ಚಂದ್ರಾಕೃತಿಯ ರಂಗಮಂಚವನ್ನು ಪರಿಚಯಿಸಿ ಅದರ ಮೇಲೆ ಸಧಬಿರುಚಿಯ ಪ್ರಸಂಗಗಳನ್ನು ಪ್ರಸಿದ್ಧಿಗೊಳಿಸಿದರು. ಗುಣವಂತೆಯಲ್ಲಿ ತಂದೆ ಶಿವರಾಮ ಹೆಗಡೆ ಹೆಸರಿನಲ್ಲಿ ರಂಗಮದಿರ ಮತ್ತು ಯಕ್ಷ ಶಿಕ್ಷಣ ನೀಡುವ ಶ್ರೀಮಯ …
ಪೂರ್ತಿ ಓದಿ...