ಪ್ರಸಿದ್ದ ವ್ಯಕ್ತಿಗಳು

ಕೆಳದಿಯ ಚೆನ್ನಮ್ಮ

ಕೆಳದಿಯ ಚೆನ್ನಮ್ಮ

ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ. ಆಳ್ವಿಕೆ ಚೆನ್ನಮ್ಮನು ಕೋಟಿಪುರದ ಸಿದ್ದಪ್ಪಶೆಟ್ಟರ ಮಗಳು ಹಾಗು ಒಂದನೆಯ ಸೋಮಶೇಖರನಾಯಕನ (1664-1679) ಮಡದಿ. ಲಿಂಗಣ್ಣಕವಿಯ ಕೆಳದಿನೃಪವಿಜಯ ಎಂಬ ಗ್ರಂಥ ಹಾಗೂ …

ಪೂರ್ತಿ ಓದಿ...

ಕರ್ನಾಟಕ ರತ್ನ ಶ್ರೀ ಶಿವಕುಮಾರ ಸ್ವಾಮಿಗಳು

Shivakumara Swamiji

ಕರ್ನಾಟಕ ರತ್ನ ಡಾ|| ಶ್ರೀ. ಶಿವಕುಮಾರ ಸ್ವಾಮಿಗಳು ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದ ಮಠಾಧಿಪತಿಗಳು. ಇವರು ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿ. ೧೨ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ “ಕಾಯಕವೇ ಕೈಲಾಸ” ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು. ಮಾರ್ಚ್ ೩, ೧೯೩೦ರಲ್ಲಿ ಇವರು ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ವೀರಶೈವ ಧರ್ಮ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. [sociallocker]ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು …

ಪೂರ್ತಿ ಓದಿ...

ಡಾ.ಸರ್.ಎಂ.ವಿಶ್ವೇಶ್ವರಯ್ಯ | Dr. Sir M Vishweshwaraiah

Sir Mokshagundam Visvesvaraya

ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಎಂದು ಜನಪ್ರಿಯರಾಗಿದ್ದ ಇವರು, ಭಾರತದ ಗಣ್ಯ ಎಂಜಿನಿಯರರಲ್ಲಿ ಒಬ್ಬರು ಮತ್ತು ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಬಾಲ್ಯ, ವಿದ್ಯಾಭ್ಯಾಸ ಹಾಗೂ ವೃತ್ತಿಜೀವನ ವಿಶ್ವೇಶ್ವರಯ್ಯನವರ ತಂದೆ ‘ಶ್ರೀನಿವಾಸ ಶಾಸ್ತ್ರಿ’, ತಾಯಿ ‘ವೆಂಕಾಚಮ್ಮ’. ವಿಶ್ವೇಶ್ವರಯ್ಯನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ವಿಶ್ವೇಶ್ವರಯ್ಯನವರು ಜನಿಸಿದ್ದು ಬೆಂಗಳೂರಿನಿಂದ ೪೦ ಮೈಲಿ ದೂರದಲ್ಲಿರುವ ಮುದ್ದೇನಹಳ್ಳಿಯಲ್ಲಿ. ಅವರು ೧೫ ವರ್ಷದವರಿರುವಾಗಲೆ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. ೧೮೮೧ ರಲ್ಲಿ ಮದರಾಸು …

ಪೂರ್ತಿ ಓದಿ...

ಶಿವಮೂರ್ತಿ ಸ್ವಾಮಿಜಿ, ಸಿರಿಗೆರೆ

Shiva Murthy Shivacharya Swamiji

ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಿರಿಗೆರೆ ಮಠದ ಈಗಿನ ಮಠಾಧಿಪತಿಗಳು. ಸಿರಿಗೆರೆ ಚಿತ್ರದುರ್ಗ ದಿಂದ ದಾವಣಗೆರೆಗೆ ಹೋಗುವ ದಾರಿಯಲ್ಲಿ ಸುಮಾರು ೩೫ ಕಿಮಿ ದೂರದಲ್ಲಿ ಇದೆ. ಸಿರಿಗೆರೆ ಮಠ ರಾಜ್ಯದಲ್ಲೆ ಶಿಕ್ಷಣ ರಂಗದಲ್ಲಿ ತುಂಬಾ ಪ್ರಸಿದ್ದಿ ಪಡೆದಿದೆ. ಹಿಂದಿನ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರು ಮಠವನ್ನು ಉತುಂಗಕ್ಕೆ ತಂದರು.ಇವರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ ಉತ್ತರಾಧಿಕಾರಿಗಳು. ಸ್ವಾಮಿಗಳಾಗುವ ಮೊದಲೇ ದೇಶ ವಿದೇಶಗಳ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಿ ವಿಶ್ವಪರ್ಯಟನೆಯ ಮೂಲಕ ವಿಶ್ವಜ್ಞಾನ ಪಡೆದವರು. [sociallocker]ಶಿಕ್ಷಣ: ’ಸೂತಸಂಹಿತೆ’ಯ ಮೇಲೆ ಪೌಢ ಪ್ರಬಂಧ ಬರೆದು ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿ ಡಾಕ್ಟರೇಟ್ …

ಪೂರ್ತಿ ಓದಿ...

ಫೀಲ್ಡ್ ಮಾರ್ಷಲ್ ಕಾರಿಯಪ್ಪ

KM Cariappa

ಫೀಲ್ಡ್ ಮಾರ್ಷಲ್ ಕೊಡಂದೆರ ಮಾದಪ್ಪ ಕಾರಿಯಪ್ಪ (ಕಾರ್ಯಪ್ಪ) (ಜನವರಿ ೨೮, ೧೮೯೯ — ಮೇ ೧೫, ೧೯೯೩) ಇವರು ಭಾರತದ ಸೇನೆಯ ಪ್ರಥಮ ದಂಡನಾಯಕರಾಗಿದ್ದರು ಮತ್ತು ಫೀಲ್ಡ್ ಮಾರ್ಷಲ್ (ಮಹಾದಂಡನಾಯಕ) ಪದವಿಯನ್ನು ಪಡೆದ ಮೊದಲಿಗರು. [sociallocker] ಬಾಲ್ಯ ಮತ್ತು ವಿದ್ಯಾಭ್ಯಾಸ ಕೊಡಂದೆರ ಮಾದಪ್ಪ ಕಾರಿಯಪ್ಪ ೨೮ನೆಯ ಜನವರಿ, ೧೮೯೯ರಂದು ಕೊಡಗಿನ ಶನಿವಾರಸಂತೆಯಲ್ಲಿ ಜನಿಸಿದರು. (ಆದರೆ ಸೈನ್ಯದ ದಾಖಲೆಗಳ ಪ್ರಕಾರ ಅವರು ಹುಟ್ಟಿದ ವರ್ಷ ೧೯೦೦ ಎಂದಿದೆ.) ಇವರು ಕೊಡವ ಜನಾಂಗದವರಾಗಿದ್ದು, ಕೊಡಂದೆರ ಮನೆತನಕ್ಕೆ ಸೇರಿದವರು. ತಂದೆ ಮಾದಪ್ಪನವರು ಕಂದಾಯ ಇಲಾಖೆ ಯಲ್ಲಿದ್ದರು. ಕಟ್ಟುನಿಟ್ಟಾಗಿ ಶಿಸ್ತನ್ನು …

ಪೂರ್ತಿ ಓದಿ...