ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ. ಆಳ್ವಿಕೆ ಚೆನ್ನಮ್ಮನು ಕೋಟಿಪುರದ ಸಿದ್ದಪ್ಪಶೆಟ್ಟರ ಮಗಳು ಹಾಗು ಒಂದನೆಯ ಸೋಮಶೇಖರನಾಯಕನ (1664-1679) ಮಡದಿ. ಲಿಂಗಣ್ಣಕವಿಯ ಕೆಳದಿನೃಪವಿಜಯ ಎಂಬ ಗ್ರಂಥ ಹಾಗೂ …
ಪೂರ್ತಿ ಓದಿ...