ಮಂಕು ತಿಮ್ಮನ ಕಗ್ಗ

ಮಂಕು ತಿಮ್ಮನ ಕಗ್ಗ ರಸಧಾರೆ – ೦೦೧

ಮಂಕು ತಿಮ್ಮನ ಕಗ್ಗ – ರಸಧಾರೆ 01

ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ  ದೇವ ಸರ್ವೇಶ ಪರಬೊಮ್ಮನೆಂದು ಜನಂ // ಆವುದನು ಕಾಣದೊಡಮಳ್ತಿಯಿಂ ನಂಬಿಹುದೋ  ಆ ವಿಚಿತ್ರಕೆ ನಮಿಸೊ – ಮಂಕು ತಿಮ್ಮ // ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ ಒಡೆಯನಾದ ಪರಮ ಪುರುಷ ಹೀಗೆ ಹತ್ತು ಹಲವಾರು ಹೆಸರುಗಳಿಂದ ಯಾವುದನ್ನು ಜನರು ಕಾಣದಿದ್ದರೂ ಪ್ರೀತಿ ಮತ್ತು ಭಕ್ತಿಯಿಂದ ನಂಬಿರುವರೋ  ಆ ವಿಚಿತ್ರಕ್ಕೆ ನಮಿಸು ಎಂದು ಹೇಳುತ್ತಾರೆ ಶ್ರೀ ಗುಂಡಪ್ಪನವರು. ನಾವಿರುವ ಭೂಮಿಯಂತಹ 9 .80 ಲಕ್ಷ ಭೂಮಿಗಳನ್ನು ನಮ್ಮ ಸೌರವ್ಯೂಹದ ಸೂರ್ಯನೊಳಕ್ಕೆ ಹಾಕಿಬಿಡಬಹುದು ಎಂದು ವಿಜ್ಞಾನಿಗಳು …

ಪೂರ್ತಿ ಓದಿ...