ಪಂಪ (ಕ್ರಿ.ಶ. ೯೦೨-೯೫೦) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. “ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ” ಎಂಬ ಎರಡು ಕೃತಿಗಳ …
ಪೂರ್ತಿ ಓದಿ...ಹಕ್ಕಿಯ ಹಾಡಿಗೆ ತಲೆದೂಗುವ ಹೂ.. | hakkiya haadige taledooguva hoo
ಹಕ್ಕಿಯ ಹಾಡಿಗೆ ತಲೆದೂಗುವ ಹೂ ನಾನಾಗುವ ಆಸೆ. ಹಸುವಿನ ಕೊರಳಿನ ಗೆಜ್ಜೆಯ ದನಿಯು ನಾನಾಗುವ ಆಸೆ. ಹಬ್ಬಿದ ಕಾಮನ ಬಿಲ್ಲಿನ ಮೇಲಿನ ಮುಗಿಲಾಗುವ ಆಸೆ. ಚಿನ್ನದ ಬಣ್ಣದ ಜಿಂಕೆಯ ಕಣ್ಣಿನ ಮಿಂಚಾಗುವ ಆಸೆ. ತೋಟದ ಕಂಪಿನ ಉಸಿರಲಿ ತೇಲುವ ಜೇನಾಗುವ ಆಸೆ. ಕಡಲಿನ ನೀಲಿಯ ನೀರಲಿ ಬಳುಕುವ ಮೀನಾಗುವ ಆಸೆ. ಸಿಡಿಲನು ಕಾರುವ ಬಿರುಮಳೆಗಂಜದೆ ಮುನ್ನಡೆಯುವ ಆಸೆ. ನಾಳೆಯ ಬದುಕಿನ ಇರುಳಿನ ತಿರುವಿಗೆ ದೀಪವನಿಡುವಾಸೆ. ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸೆ. ಮಾನವ ಹೃದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ.
ಪೂರ್ತಿ ಓದಿ...