ಬಜಗನ್ ಎಂಬ ಸೂಫೀ ಸಂಪ್ರದಾಯ ಮಧ್ಯ ಏಷ್ಯಾದಲ್ಲಿ ಬೆಳೆದು ಭಾರತ ಉಪಖಂಡದಲ್ಲಿ ತನ್ನ ಪ್ರಭಾವವನ್ನು ಬೀರಿತು. ಹದಿನಾಲ್ಕನೇ ಶತಮಾನದ ಅಂತ್ಯಭಾಗದಲ್ಲಿದ್ದ ಖಾಜಾ ಬಹಾವುದ್ದೀನ್ ನಕ್ಷಾಬಂದ್ ಈ ಪಂಥದ ಒಬ್ಬ ಮಹಾನ್ ವ್ಯಕ್ತಿ. ಅವನ ಕಾಲಾನಂತರ ಈ ಪಂಥವನ್ನು ನಕ್ಷಾಬಂದೀ ಪಂಥ ಎಂದೇ ಕರೆಯಲಾಯಿತು. ನಕ್ಷಾಬಂದೀ ಪರಂಪರೆಯ ಸೂಫೀ ಸಂತರ ಕಥನ ಕಲೆ ವಿಶೇಷವಾದದ್ದು. ಆ ಕಥೆಯ ಕೊನೆಗೆ ಒಂದು ಸಂದೇಶವನ್ನು ನೀಡುವುದು ಅವರ ಕಲೆ. ಇಂಥ ಒಂದು ಪುಟ್ಟ ಕಥೆ ಹೀಗಿದೆ. ಒಂದು ರಾತ್ರಿ ಒಬ್ಬ ಕಳ್ಳ ಹೊಂಚುಹಾಕಿ ಒಂದು ಮನೆಯಲ್ಲಿ ಕಳ್ಳತನ ಮಾಡಲು …
ಪೂರ್ತಿ ಓದಿ...ಸುಖೀ ದಾಂಪತ್ಯದ ಗುಟ್ಟು
ನಾನೊಮ್ಮೆ ಪಾಶ್ಚಾತ್ಯ ದೇಶದಲ್ಲಿದ್ದಾಗ ಒಬ್ಬರು “ನಿಮಗೆ ಮದುವೆಯಾಗಿ ಎಷ್ಟು ವರ್ಷವಾಯಿತು” ? ಎಂದು ಕೇಳಿದರು. ನಾನು “ಇಪ್ಪತ್ತೆಂಟು ವರ್ಷ” ಎಂದೆ, ಆವರು, ” ಒಬ್ಬಳೇ ಹೆಂಡತಿಯೊಂದಿಗೆ ಅಷ್ಟು ವರ್ಷ ಹೇಗಿದ್ದೀರಿ ?” ಎಂದು ಆಶ್ಚರ್ಯ ಪಟ್ಟರು. ನಾನು ಅವರಿಗೆ ಹೇಳಿದೆ, ” ನನ್ನದೇನೂ ವಿಶೇಷವಲ್ಲ, ನನ್ನ ಅಜ್ಜ, ಅಜ್ಜಿ ದಂಪತಿಗಳಾಗಿ ಎಪ್ಪತ್ತು ವರ್ಷಗಳ ಕಾಲ ಇದ್ದರು ” ಅವರಿಗೆ ನಂಬಲಾಗಲಿಲ್ಲ. ನನ್ನಜ್ಜ, ಅಜ್ಜಿ ಚೆನ್ನಾಗಿಯೇ ಬದುಕಿದರು. ಅಂದರೆ ಅವರಲ್ಲಿ ಜಗಳ, ಮನಸ್ತಾಪ , ವಿಚಾರ ಭೇದ ಇರಲಿಲ್ಲವೆಂದಲ್ಲ. ಒಂದೊಂದು ಬಾರಿ ಜಗಳವಾಡುತ್ತಿದ್ದರೆ ಏಳೇಳು ಜನ್ಮದಲ್ಲಿ …
ಪೂರ್ತಿ ಓದಿ...