(೧೮೩೨-೧೯೦೩) ರೆವರೆಂಡ್ ಫರ್ಡಿನ್ಯಾಂಡ್ ಕಿಟ್ಟೆಲ್ ರವರ ಆದ್ಯ ಕರ್ತವ್ಯ ಮತಪ್ರಚಾರವಾದಾಗ್ಯೂ, ತಮ್ಮ ಮಾನವೀಯ ಮೌಲ್ಯಗಳ ಗಣಿಯಾಗಿದ್ದರು. ಕಿಟ್ಟೆಲ್ ರವರು, ಕನ್ನಡದ ಬಗ್ಗೆ ವಿಶೇಷ ಒಲವನ್ನು ಹೊಂದಿದ್ದರು. ಯೂರೋಪಿಯನ್ ಭಾಷೆಗಳಲ್ಲಿ ಪ್ರಭುತ್ವ ಹೊಂದಿದ್ದ ಅವರಿಗೆ, ದೂರದ ಭಾರತದ, ಧಾರವಾಡದ ಪರಿಸರ, ನಿಸರ್ಗಸೌಂದರ್ಯ, ಅಲ್ಲಿನ ಮುಗ್ಧಜನರ ಭಾಷೆ, ಸರಳ ಆಚಾರ ವ್ಯವಹಾರ, ಉಡುಗೆ-ತೊಡುಗೆಗಳು ಬಹು ಮೆಚ್ಚುಗೆಯಾಗಿರಬೇಕು. ಕನ್ನಡ ಭಾಷೆಯನ್ನಂತೂ ಅವರು ತುಂಬಾ ಹಚ್ಚಿಕೊಂಡಿದ್ದರು. ಭಾರತದ ಜನತೆಗೆ ಮೊದಲು ವಿದೇಶೀಯರಂತೆ ತೋರಿದರೂ, ಅವರು ತಮ್ಮ ತಾಯ್ನಾಡಿಗೆ ವಾಪಸ್ ಹೋಗುವ ಹೊತ್ತಿಗೆ, ಅವರು ನಮ್ಮವರಲ್ಲಿ ಒಬ್ಬರಾಗಿ ಹೋಗಿದ್ದರು. ಇದಕ್ಕೆ ಕಾರಣ, …
ಪೂರ್ತಿ ಓದಿ...ತುಳು
ತುಳು ಭಾರತ ದೇಶದ ಕರ್ನಾಟಕ ರಾಜ್ಯದ ಪಶ್ಚಿಮ ತೀರದಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಹೆಚ್ಚು ಮಾತನಾಡುವ ಭಾಷೆ. ತುಳು ಮಾತಾಡುವವರನ್ನು ತುಳುವರು (ಅಥವಾ ತುಳುವಲ್ಲಿ ತುಳುವೆರು )ಎಂದು ಕರೆಯುತ್ತಾರೆ. ಹಿಂದೆ ತುಳು ಬ್ರಾಹ್ಮಣರು ತಿಗಳಾರಿ ಎಂಬ ಲಿಪಿಯನ್ನು ಉಪಯೋಗಿಸುತ್ತಿದರು.ಈ ಲಿಪಿಯ ಮುಖ್ಯಭಾಷೆ ಸಂಸ್ಕೃತ, ಕಾಲಕ್ರಮೇಣ ಅದರ ಬಳಕೆ ಇಲ್ಲವಾಗಿದೆ.ಈ ಲಿಪಿಯ ಬಗ್ಗೆ ತಿಳಿದಿರುವವರು ಈಗ ಕಡಿಮೆ. ಪುರಾತನ ತಿಗಳಾರಿ ಲಿಪಿ ಮಲಯಾಳಂ ಲಿಪಿಯನ್ನು ಹೋಲುತ್ತದೆ.ಪ್ರಸ್ತುತ ತುಳುಭಾಷೆಯನ್ನು ಬರೆಯಲು ಕನ್ನಡ ಲಿಪಿಯನ್ನು ಬಳಸುತ್ತಾರೆ. ಆದರೆ ತುಳುಭಾಷೆಯಲ್ಲಿ ರಚಿತವಾಗಿರುವ ಕೃತಿಗಳ ಲಭ್ಯತೆ ಕಡಿಮೆ …
ಪೂರ್ತಿ ಓದಿ...ದ್ರಾವಿಡ ಭಾಷೆಗಳು
ದ್ರಾವಿಡ ಭಾಷೆಗಳು ಭಾರತೀಯ ಉಪಖಂಡದ ಒಂದು ಭಾಷಾ ಕುಟುಂಬವಾಗಿದೆ. ದ್ರಾವಿಡ ಭಾಷೆಗಳು ದಕ್ಷಿಣ ಭಾರತ, ಮಧ್ಯ ಭಾರತ, ಶ್ರೀಲಂಕಾ, ಪಾಕಿಸ್ತಾನ, ನೇಪಾಳ ಪ್ರಾಂತ್ಯಗಳಲ್ಲಿ ಬಳಕೆಯಲ್ಲಿವೆ. ದ್ರಾವಿಡ ಭಾಷೆಗಳು ಯಾವುದೇ ಬೇರೆಯ ಭಾಷಾಕುಟುಂಬಕ್ಕೆ ಸೇರಿದೆಯೇ ಎಂದು ತಿಳಿದುಕೊಳ್ಳಲು ಬಹಳ ಸಂಶೋಧನೆಗಳು ನಡೆದಿವೆಯಾದರೂ, ಖಚಿತವಾದ ಸಂಬಂಧವು ಈವರೆಗೂ ದೊರೆತಿಲ್ಲ. ಹೀಗಾಗಿ ಇದನ್ನು ಒಂದು ಸ್ವತಂತ್ರ ಭಾಷಾ ಕುಟುಂಬವೆಂದೇ ಪರಿಗಣಿಸಲಾಗಿದೆ. ದ್ರಾವಿಡ ಭಾಷೆಗಳ ಮೂಲ ಭಾಷೆಯಾದ ಪೂರ್ವ ದ್ರಾವಿಡಭಾಷೆಯು ಇತಿಹಾಸ ಪೂರ್ವಕಾಲದಲ್ಲಿ, ಅನೇಕ ಸಹಸ್ರ ವರ್ಷಗಳ ಹಿಂದೆ ಹೊರಗಿನಿಂದ ಭಾರತಕ್ಕೆ ಬಂತೆಂದು ಭಾವಿಸಲಾಗಿದೆ.ದ್ರಾವಿಡಭಾಷೆಗಳಿಗೆ ಕೆಲವು ಸಾಮಾನ್ಯ ಲಕ್ಷಣಗಳಿದ್ದು ಜಗತ್ತಿನ …
ಪೂರ್ತಿ ಓದಿ...